Hello world!

Welcome to WordPress. This is your first post. Edit or delete it, then start writing!

Anganawadi helpers job apply : ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೌದು, 89 ಅಂಗನವಾಡಿ ಕಾರ್ಯಕರ್ತೆಯರು, 323 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಯಾವ ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಕಲಬುರಗಿ ನಗರದಲ್ಲಿ ಖಾಲಿಯಿರುವ 11 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪೇಜ್ ತೆರೆದುಕೊಳ್ಳುತ್ತದೆ. ಅಂಗನವಾಡಿ ಕಾರ್ಯಕರ್ತೆ ಮಿನಿ ಅಂಗನವಾಡಿ ಕಾರ್ಯಕರ್ತೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಪ್ರಾಜೆಕ್ಟ್ ಆಯ್ಕೆ ಮಾಡಿಯಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಅಧಿಸೂಚನೆ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಯಾವ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂಬುದು ತಾನಾಗಿಯೇ ಆಯ್ಕೆಯಾಗುತ್ತದೆ. ಇಲ್ಲದಿದ್ದರೆ ನೀವು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಿಮ್ಮ ಜಾತಿ ಆಯ್ಕೆ ಮಾಡಿಕಳ್ಳಬೇಕು. ಜಾತಿ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ ನಮೂದಿಸಬೇಕು ನಂತರ Submit ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

Anganawadi helpers job apply ಯಾವ ತಾಲೂಕಿಗೆ ಎಷ್ಟು ಹುದ್ದೆಗಳು ಖಾಲಿಯಿವೆ?

ಸೇಡಂ ತಾಲೂಕಿನ ವಿವಿಧ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 4 ಅಂಗನವಾಡಿ ಕಾರ್ಯಕರ್ತೆಯರು, 21 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08411 276136 ಗೆ ಅರ್ಜಿ ಸಲ್ಲಿಸಬಹುದು.

ಅಫಜಲ್ಪೂರ ತಾಲೂಕಿಗೆ 6 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಳಂದ ತಾಲೂಕಿಗೆ 20 ಅಂಗನವಾಡಿ ಕಾರ್ಯಕರ್ತೆ ಹಾಗೂ 68 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಚಿಂಚೋಳಿ ತಾಲೂಕಿಗೆ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಚಿತ್ತಾಪುರ ತಾಲೂಕಿಗೆ 5 ಅಂಗನವಾಡಿ ಕಾರ್ಯಕರ್ತೆ, 29 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಅದೇ ರೀತಿ ಕಲಬುರಗಿ ಗ್ರಾಮೀಣ ಕ್ಷೇತ್ರಕ್ಕೆ 13 ಅಂಗನವಾಡಿ ಸಹಾಯಕಿರ ಹುದ್ದೆಗೆ 56 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೇವರ್ಗಿ ತಾಲೂಕಿಗೆ 19 ಅಂಗನವಾಡಿ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಹಾಬಾದ್ ತಾಲೂಕಿಗೆ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅರ್ಜಿ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳ ವಯೋಮಿತಿ 19 ರಿಂದ 35 ವಯೋಮಿತಿಯೊಳಗಿರಬೇಕು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ದರ್ಜೆ ಭಾಷೆಯನ್ನಾಗಿ ಓದಿರಬೇಕು.

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

1 thought on “Hello world!”

Leave a Comment